Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 22 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಅಕ್ಟೋಬರ್ 2027

ಶುಕ್ರವಾರ · ಸಾಮಾನ್ಯ ಕಾಲದ 29ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 29ನೇ ವಾರದ ಶುಕ್ರವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಜಾನ್ ಪಾಲ್ II, ಪೋಪ್ · ಐಚ್ಛಿಕ ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 7:18–25

18ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. 19ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. 20ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. 21ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ. 22ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ. 23ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ. 24ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? 25ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

ಪ್ರತಿವಚನ ಕೀರ್ತನೆ

ಕೀರ್ತ 119:66, 68, 76–77, 93–94

66ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ. 68ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು. 76ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು. 77ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ. 93ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ. 94ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.

ಸುವಾರ್ತೆ

ಲೂಕ 12:54–59

54ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ. 55ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. 56ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? 57“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? 58ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. 59ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು