Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 22 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 9 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಅಕ್ಟೋಬರ್ 2027

ಶುಕ್ರವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Holy Apostle James the son of Alphæus (1st C)

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಎಫೆ 6:18–24

18ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. 19ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. 20ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. 21ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. 22ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. 23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ. 24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.

ಸುವಾರ್ತೆ

ಲೂಕ 7:31–35

31ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? 32ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ. 33ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ. 34ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ. 35ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 22 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು