Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 23 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 10 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಅಕ್ಟೋಬರ್ 2027

ಶನಿವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Martyrs Eulampius and Eulampia, at Nicomedia, and 200 martyrs with them († 303-311)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಕೊರಿ 15:39–45

39ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. 40ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ. 41ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು. 42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು. 43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; 44ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ. 45“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.

ಸುವಾರ್ತೆ

ಲೂಕ 5:27–32

27ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, 28ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು. 29ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು. 30ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು. 31ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; 32ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 23 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು