Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 25 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ಅಕ್ಟೋಬರ್ 2027

ಸೋಮವಾರ · ಸಾಮಾನ್ಯ ಕಾಲದ 30ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 30ನೇ ವಾರದ ಸೋಮವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 8:12–17

12ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ. 13ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ. 14ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ. 15ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. 16ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. 17ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಪ್ರತಿವಚನ ಕೀರ್ತನೆ

ಕೀರ್ತ 68:1, 3, 5–6, 19–20

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಹಾಡು. ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ. 3ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಆನಂದಧ್ವನಿಮಾಡಲಿ. 5ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. 6ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು. 19ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ 20ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.

ಸುವಾರ್ತೆ

ಲೂಕ 13:10–17

10ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ 13ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. 14ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು. 15ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. 16ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು. 17ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು