ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 25 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 12 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಅಕ್ಟೋಬರ್ 2027
ಸೋಮವಾರ · ಪಂಚಾಶತ್ತಮದ ನಂತರದ 19ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Martyrs Probos, Tarachos and Andronicus, at Tarsus in Cilicia († 304)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ, 2ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ. 3ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ. 5ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. 6ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು. 7ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.
ಸುವಾರ್ತೆ
36ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. 37ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು, 38ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು. 39ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು. 40ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು. 41ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. 42ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ, 43ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ, 44ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. 45ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ. 46ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. 47ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು. 48ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 49ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 50ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 25 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು