ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 26 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಅಕ್ಟೋಬರ್ 2027
ಮಂಗಳವಾರ · ಸಾಮಾನ್ಯ ಕಾಲದ 30ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 30ನೇ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
18ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ. 19ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ. 20ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ, 21ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ. 22ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ 23ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ. 24ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? 25ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
ಸುವಾರ್ತೆ
18ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ? 19ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು. 20ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? 21ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು