ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 26 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 13 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಅಕ್ಟೋಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 19ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Martyrs Carpos, Papilus, Agathodoros and Agathonica, at Pergamun († 251)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
8ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. 9ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ, 11ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. 12ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
ಸುವಾರ್ತೆ
1ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ, 2ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, 3ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 26 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು