ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 27 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ಅಕ್ಟೋಬರ್ 2027
ಬುಧವಾರ · ಸಾಮಾನ್ಯ ಕಾಲದ 30ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 30ನೇ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
26ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. 27ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು. 28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. 29ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. 30ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
ಪ್ರತಿವಚನ ಕೀರ್ತನೆ
3ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. 4ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. 5ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. 6ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.
ಸುವಾರ್ತೆ
22ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು. 23ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, 24ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ. 25ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು 26ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. 27ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು. 28ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು. 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು. 30ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು