Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 27 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 14 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಅಕ್ಟೋಬರ್ 2027

ಬುಧವಾರ · ಪಂಚಾಶತ್ತಮದ ನಂತರದ 19ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Martyrs Nazarius, Gervasius, Protasius and Celsius of Milan (1st C)

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಫಿಲಿಪ್ಪಿ 1:12–20

12ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ. 15ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. 16ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ. 17ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ. 18ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. 19ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು. 20ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ಸುವಾರ್ತೆ

ಲೂಕ 8:22–25

22ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು. 23ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು. 24ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. 25ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 27 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು