Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 28 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 15 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಅಕ್ಟೋಬರ್ 2027

ಗುರುವಾರ · ಪಂಚಾಶತ್ತಮದ ನಂತರದ 19ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Venerable Euthymios the New, of Thessalonica and Monk of Mt Athos († 889)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಫಿಲಿಪ್ಪಿ 1:20–27

20ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು. 21ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ. 22ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. 23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ. 24ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ. 25ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ. 26ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. 27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.

ಸುವಾರ್ತೆ

ಲೂಕ 9:7–11

7ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ, 8ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು. 9ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. 10ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು. 11ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 28 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು