ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 29 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 29 ಅಕ್ಟೋಬರ್ 2027
ಶುಕ್ರವಾರ · ಸಾಮಾನ್ಯ ಕಾಲದ 30ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 30ನೇ ವಾರದ ಶುಕ್ರವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
1ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ. 2ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. 3ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ. 4ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು. 5ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
ಪ್ರತಿವಚನ ಕೀರ್ತನೆ
12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು. 13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. 14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ. 15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ. 19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ. 20ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!
ಸುವಾರ್ತೆ
1ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು. 2ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, 3“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. 4ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ, 5“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು. 6ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು