ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 30 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಅಕ್ಟೋಬರ್ 2027
ಶನಿವಾರ · ಸಾಮಾನ್ಯ ಕಾಲದ 30ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 30ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ. 2ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ? 11ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ. 12ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು. 25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು. 26ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು. 27ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ. 28ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ. 29ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
ಪ್ರತಿವಚನ ಕೀರ್ತನೆ
12ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. 13ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ. 14ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ. 15ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು. 17ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. 18ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
ಸುವಾರ್ತೆ
1ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು. 7ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. 8ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು 9ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ. 10ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. 11ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು