Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 30 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 17 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಅಕ್ಟೋಬರ್ 2027

ಶನಿವಾರ · ಪಂಚಾಶತ್ತಮದ ನಂತರದ 19ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Holy Prophet Hosea († 820 BC)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಕೊರಿ 15:58–16:3

58ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ. 16:1ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ. 2ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ. 3ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.

ಸುವಾರ್ತೆ

ಲೂಕ 6:1–10

1ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು. 2ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ, 3ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? 4ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ, 5“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು. 6ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. 7ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. 8ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. 9ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ, 10ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 30 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು