Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 2 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 20 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ನವೆಂಬರ್ 2027

ಮಂಗಳವಾರ · ಪಂಚಾಶತ್ತಮದ ನಂತರದ 20ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Great Martyr Artemius of Antioch († 362)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಫಿಲಿಪ್ಪಿ 2:16–23

16ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. 17ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ. 18ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ. 19ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. 20ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. 21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. 22ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು. 23ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ.

ಪತ್ರಿಕೆ (ಸಂತ ಆರ್ತೆಮಿಯಸ್)

2 ತಿಮೊ 2:1–10

1ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು. 2ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. 3ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು. 4ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ. 5ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ. 6ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ. 7ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. 8ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ. 9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. 10ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

ಸುವಾರ್ತೆ

ಲೂಕ 9:23–27

23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? 26ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. 27ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 2 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು