Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 3 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ನವೆಂಬರ್ 2027

ಬುಧವಾರ · ಸಾಮಾನ್ಯ ಕಾಲದ 31ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 31ನೇ ವಾರದ ಬುಧವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಮಾರ್ಟಿನ್ ಡಿ ಪೊರೆಸ್, ಸನ್ಯಾಸಿ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 13:8–10

8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. 9ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. 10ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.

ಪ್ರತಿವಚನ ಕೀರ್ತನೆ

ಕೀರ್ತ 112:1–2, 4–5, 9

1ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 4ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 5ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 9ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

ಸುವಾರ್ತೆ

ಲೂಕ 14:25–33

25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ, 26“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು. 28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? 29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು, 30‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು. 31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ? 32ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. 33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು