Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 4 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ನವೆಂಬರ್ 2027

ಗುರುವಾರ · ಸಾಮಾನ್ಯ ಕಾಲದ 31ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 31ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಚಾರ್ಲ್ಸ್ ಬೊರೊಮಿಯೊ, ಧರ್ಮಾಧ್ಯಕ್ಷ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 14:7–12

7ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ, 8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ. 9ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು. 10ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. 11ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. 12ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.

ಪ್ರತಿವಚನ ಕೀರ್ತನೆ

ಕೀರ್ತ 27:1, 4, 13–14

1ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.

ಸುವಾರ್ತೆ

ಲೂಕ 15:1–10

1ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು. 2ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. 3ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 4ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? 5ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, 6ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ. 7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ. 8“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? 9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ. 10ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು