Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 4 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 22 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ನವೆಂಬರ್ 2027

ಗುರುವಾರ · ಪಂಚಾಶತ್ತಮದ ನಂತರದ 20ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Holy Equal-to-the-Apostles Abercius, Bishop and Wonderworker of Hieropolis († c. 167)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಪ್ರಾರ್ಥನೆ: ಸುವಾರ್ತೆ (ದೇವಮಾತೆಯ ಕಜಾನ್ ಐಕಾನ್)

ಲೂಕ 1:39–49, 56

39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. 42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? 44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.” 46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.

ಪತ್ರಿಕೆ (ದೇವಮಾತೆಯ ಕಜಾನ್ ಐಕಾನ್)

ಫಿಲಿಪ್ಪಿ 2:5–11

5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, 11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ಸುವಾರ್ತೆ (ದೇವಮಾತೆಯ ಕಜಾನ್ ಐಕಾನ್)

ಲೂಕ 10:38–42; 11:27–28

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 4 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು