Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 5 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ನವೆಂಬರ್ 2027

ಶುಕ್ರವಾರ · ಸಾಮಾನ್ಯ ಕಾಲದ 31ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 31ನೇ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 15:14–21

14ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ. 15ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ. 17ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು 18ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. 19ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ. 20ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು. 21“ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.

ಪ್ರತಿವಚನ ಕೀರ್ತನೆ

ಕೀರ್ತ 98:1–4

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

ಸುವಾರ್ತೆ

ಲೂಕ 16:1–8

1ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, 2ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು. 3ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. 4ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು, 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು, 6ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು. 8ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು