Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 6 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ನವೆಂಬರ್ 2027

ಶನಿವಾರ · ಸಾಮಾನ್ಯ ಕಾಲದ 31ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 31ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 16:3–9, 16, 22–27

3ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. 4ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ. 5ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ. 6ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. 7ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು. 8ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ. 9ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. 16ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ. 22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. 23ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. 24ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್. 25ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, 27ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.

ಪ್ರತಿವಚನ ಕೀರ್ತನೆ

ಕೀರ್ತ 145:2–5, 10–11

2ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು. 3ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು. 4ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. 5ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. 10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. 11ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.

ಸುವಾರ್ತೆ

ಲೂಕ 16:9–15

9“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. 10ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು. 11ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? 12ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು? 13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು. 14ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು. 15ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು