ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 8 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ನವೆಂಬರ್ 2027
ಸೋಮವಾರ · ಸಾಮಾನ್ಯ ಕಾಲದ 32ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 32ನೇ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ; 2ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ. 3ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. 4ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ. 5ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ. 6ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ. 7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? 8ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. 9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ, 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
ಸುವಾರ್ತೆ
1ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? 2ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು. 3ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. 4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು. 5ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು, 6ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು