ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 8 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 26 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ನವೆಂಬರ್ 2027
ಸೋಮವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Great Martyr Demetrius of Thessalonica († c. 306)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
15ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ. 16ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ. 17ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು. 18ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ. 19ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ. 64:1ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು! 2ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! 3ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು! 4ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ. 5ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ? 8ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ. 9ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ಸಂಧ್ಯಾ ಪ್ರಾರ್ಥನೆ: ವಾಚನ
2“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ. 3ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’” 4ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ; 5ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು? 6‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ. 7ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ. 8ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು. 9ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ. 10“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ. 11ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ. 12ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ
16“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ. 17ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು. 18ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. 19ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. 20ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು. 21ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. 22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
ಪತ್ರಿಕೆ
10ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ. 11ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. 12ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. 13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು. 15ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ. 16ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ. 17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ. 18ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ. 19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು. 20ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್. 21ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. 22ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. 23ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
ಪತ್ರಿಕೆ (ಭೂಕಂಪದ ಸಮಯದಲ್ಲಿ)
6ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ. 7ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? 8ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. 9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? 10ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. 11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ. 12ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ. 13ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು. 25ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು? 26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ. 27“ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
ಪತ್ರಿಕೆ (ಸಂತ ದೆಮೆತ್ರಿಯಸ್)
1ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು. 2ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. 3ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು. 4ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ. 5ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ. 6ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ. 7ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. 8ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ. 9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. 10ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
ಸುವಾರ್ತೆ
22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು. 23ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. 24ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
ಸುವಾರ್ತೆ (ಭೂಕಂಪದ ಸಮಯದಲ್ಲಿ)
23ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 24ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು. 25ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು. 26ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು. 27ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
ಸುವಾರ್ತೆ (ಸಂತ ದೆಮೆತ್ರಿಯಸ್)
17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ. 18“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. 19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. 20ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. 21ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು. 22ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ. 23ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ. 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ 25‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. 26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ. 16:1“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. 2ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 8 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು