ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 9 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 27 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ನವೆಂಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Martyr Nestor of Thessalonica († c. 306)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು, 2ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ. 7ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ. 8ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ. 9ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ, 10ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ, 11ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
ಸುವಾರ್ತೆ
1ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. 2ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. 3ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು. 5ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. 6ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, 7ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’ 8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ. 9ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. 10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 9 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು