ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 10 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ನವೆಂಬರ್ 2027
ಬುಧವಾರ · ಸಾಮಾನ್ಯ ಕಾಲದ 32ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 32ನೇ ವಾರದ ಬುಧವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಮಹಾನ್ ಸಂತ ಲಿಯೋ, ಪೋಪ್ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
3ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. 4ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” 6“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, 7ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.
ಸುವಾರ್ತೆ
11ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು. 12ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, 13“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು. 14ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. 15ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, 16ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು. 17ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? 18ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ, 19ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
ಇಂದಿನ ಸಂತರು
- ಮಹಾನ್ ಸಂತ ಲಿಯೋ, ಪೋಪ್ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು