ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 10 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ನವೆಂಬರ್ 2027
ಬುಧವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Great Martyr Paraskeva (Piatnitsa) of Iconium (3rd C)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
18ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. 19ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, 20ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು. 21ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. 22ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. 23ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
ಸುವಾರ್ತೆ
9ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. 10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು. 11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? 12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? 13ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 10 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು