ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 11 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ನವೆಂಬರ್ 2027
ಗುರುವಾರ · ಸಾಮಾನ್ಯ ಕಾಲದ 32ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 32ನೇ ವಾರದ ಗುರುವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಟೂರ್ಸ್ನ ಸಂತ ಮಾರ್ಟಿನ್, ಧರ್ಮಾಧ್ಯಕ್ಷ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
ಕೀರ್ತ 119:89–91, 130, 135, 175
89ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. 90ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ. 91ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ. 130ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ. 135ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. 175ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
ಸುವಾರ್ತೆ
20ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. 21‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು. 22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. 23ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. 24ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು. 25ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
ಇಂದಿನ ಸಂತರು
- ಟೂರ್ಸ್ನ ಸಂತ ಮಾರ್ಟಿನ್, ಧರ್ಮಾಧ್ಯಕ್ಷ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು