Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 11 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 29 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ನವೆಂಬರ್ 2027

ಗುರುವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Martyr Anastasia the Roman (3rd C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಕೊಲೊ 1:24–29

24ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ. 25ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು. 26ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. 27ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ. 28ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. 29ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.

ಸುವಾರ್ತೆ

ಲೂಕ 11:14–23

14ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. 15ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು. 16ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು. 17ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು. 18ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, 19ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. 20ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. 21“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; 22ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. 23ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 11 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು