ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 12 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ನವೆಂಬರ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Hieromartyr Zenobios, Bishop of Aegea, and his sister Zenobia in Cilicia († 285)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ, 2ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. 3ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ. 4ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ. 5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ. 6ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ. 7ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಸುವಾರ್ತೆ
23ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. 24“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು, 25ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ, 26ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 12 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು