ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 13 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ನವೆಂಬರ್ 2027
ಶನಿವಾರ · ಸಾಮಾನ್ಯ ಕಾಲದ 32ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 32ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
2ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. 36ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು. 37ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ. 42ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು 43ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.
ಸುವಾರ್ತೆ
1ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. 3ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು. 4ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ, 5ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.” 6ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ. 7ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? 8ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು