ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 14 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ನವೆಂಬರ್ 2027
ಭಾನುವಾರ · ಸಾಮಾನ್ಯ ಕಾಲದ 33ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 33ನೇ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. 2ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. 3ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
ಪ್ರತಿವಚನ ಕೀರ್ತನೆ
5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. 8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. 9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು. 10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. 11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಎರಡನೆಯ ವಾಚನ
11ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು. 12ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. 14ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ. 18ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
ಸುವಾರ್ತೆ
24ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು. 25ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’ 26ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. 27ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.” 28“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ. 29ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ. 30ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 31ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.” 32“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು