Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 15 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ನವೆಂಬರ್ 2027

ಸೋಮವಾರ · ಸಾಮಾನ್ಯ ಕಾಲದ 33ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 33ನೇ ವಾರದ ಸೋಮವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಮಹಾನ್ ಸಂತ ಆಲ್ಬರ್ಟ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 119:53, 61, 134, 150, 155, 158

53ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ. 61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ. 134ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು. 150ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ. 155ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ. 158ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.

ಸುವಾರ್ತೆ

ಲೂಕ 18:35–43

35ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು, 36ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. 37ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ, 38ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು. 39ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು. 40ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ, 41ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು. 42ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು. 43ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು