ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 15 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 2 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ನವೆಂಬರ್ 2027
ಸೋಮವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Martyrs Acyndinos, Pegasias, Aphthonios, Elpidiphoros, Anempodistus and 7,000 suffering with them in Persia (c.341-345)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. 14ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು. 15ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು. 16ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. 17ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ. 18ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ. 19ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ. 20ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
ಸುವಾರ್ತೆ
29ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ. 30ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. 31ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 32ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 33“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 15 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು