ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 16 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ನವೆಂಬರ್ 2027
ಮಂಗಳವಾರ · ಸಾಮಾನ್ಯ ಕಾಲದ 33ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 33ನೇ ವಾರದ ಮಂಗಳವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಮಹಾನ್ ಸಂತ ಗೆರ್ಟ್ರೂಡ್, ಕನ್ಯೆ · ಐಚ್ಛಿಕ ಸ್ಮರಣೆ
ಸ್ಕಾಟ್ಲೆಂಡ್ನ ಸಂತ ಮಾರ್ಗರೆಟ್ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. 2ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ 3ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. 4ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ. 5ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. 6ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. 7ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
ಸುವಾರ್ತೆ
1ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ, 2ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು. 3ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು. 4ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು. 5ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು, 6ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು. 7ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು. 8ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು. 9ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ. 10ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
ಇಂದಿನ ಸಂತರು
- ಮಹಾನ್ ಸಂತ ಗೆರ್ಟ್ರೂಡ್, ಕನ್ಯೆ
- ಸ್ಕಾಟ್ಲೆಂಡ್ನ ಸಂತ ಮಾರ್ಗರೆಟ್
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು