ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 16 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 3 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ನವೆಂಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Martyrs Akepsimos the Bishop, Joseph the Presbyter and Haiphal the Deacon of Persia (4th C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ, 21“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ. 23ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ. 3:1ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. 2ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. 3ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
ಸುವಾರ್ತೆ
34ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು. 35ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು. 36ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು. 37ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. 38ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು. 39ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. 40ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. 41ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 16 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು