ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 17 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ನವೆಂಬರ್ 2027
ಬುಧವಾರ · ಸಾಮಾನ್ಯ ಕಾಲದ 33ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 33ನೇ ವಾರದ ಬುಧವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಹಂಗೇರಿಯ ಸಂತ ಎಲಿಜಬೆತ್, ಸನ್ಯಾಸಿನಿ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ದಾವೀದನ ಪ್ರಾರ್ಥನೆ. ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ. 5ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ. 6ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು. 8ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ. 15ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
ಸುವಾರ್ತೆ
11ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು. 12ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು. 13ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು. 14ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು. 15ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು. 16ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು, 17ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. 18ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು, 19ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. 20ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು. 22ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ? 23ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ, 24ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು. 25ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು. 26ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ 27ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು. 28ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.
ಇಂದಿನ ಸಂತರು
- ಹಂಗೇರಿಯ ಸಂತ ಎಲಿಜಬೆತ್, ಸನ್ಯಾಸಿನಿ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು