ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 18 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 5 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ನವೆಂಬರ್ 2027
ಗುರುವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Martyrs Galaction and his wife Epistimia, at Emesa (3rd C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 3ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ. 4ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ. 5ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. 6ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. 7ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು. 8ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, 9ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
ಸುವಾರ್ತೆ
47ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ. 48ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. 49ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ 50ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. 52ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು. 53ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ, 54ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. 12:1ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 18 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು