Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 19 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ನವೆಂಬರ್ 2027

ಶುಕ್ರವಾರ · ಸಾಮಾನ್ಯ ಕಾಲದ 33ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 33ನೇ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

1 ಪೂರ್ವ 29:10–12

10ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ. 11ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ. 12ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.

ಸುವಾರ್ತೆ

ಲೂಕ 19:45–48

45ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ, 46“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು. 47ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. 48ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು