Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 20 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ನವೆಂಬರ್ 2027

ಶನಿವಾರ · ಸಾಮಾನ್ಯ ಕಾಲದ 33ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 33ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 9:1–3, 5, 15, 18

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 3ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. 5ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 18ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.

ಸುವಾರ್ತೆ

ಲೂಕ 20:27–40

27ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ, 28“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ. 29ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. 30ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. 32ಕಡೆಯಲ್ಲಿ ಆ ಹೆಂಗಸೂ ಸತ್ತಳು. 33ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು. 34ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. 35ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. 36ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ. 37ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ. 38ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. 39ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು. 40ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು