Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 20 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 7 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ನವೆಂಬರ್ 2027

ಶನಿವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Martyr Hieron and the other 32 Martyrs of Melitene: Hieron, Hysichius, Nicander, Athanasius, Mamantus, Barachius, Callinicus, Theogenes, Nikon, Longinus, Theodore, Valerius, Xantheius, Theodulus, Callimachus, Eugene, Theodochus, Ostrichius, Epiphanius, Maximian, Duceitius, Claudian, Theophilus, Gigantius, Dorotheus, Theodotus, Castrichius, Anikita, Themelius, Eutichius, Hilarion, Diodotus, and Amonitus (3rd C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 5:1–10

1ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. 2ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. 3ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. 4ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ. 5ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ. 6ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ 7ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ. 8ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ. 9ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ. 10ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.

ಸುವಾರ್ತೆ

ಲೂಕ 9:1–6

1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು, 2ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು. 3ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು. 4ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ. 5ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು. 6ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 20 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು