Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 21 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ನವೆಂಬರ್ 2027

ಭಾನುವಾರ · ಸಾಮಾನ್ಯ ಕಾಲದ 34ನೇ ವಾರ

ಹಬ್ಬಗಳು ಮತ್ತು ಸಂತರು

ನಮ್ಮ ಕರ್ತನಾದ ಯೇಸು ಕ್ರಿಸ್ತ, ವಿಶ್ವದ ಅರಸ

ಮಹೋತ್ಸವ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ದಾನಿ 7:13–14

13ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. 14ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಪ್ರತಿವಚನ ಕೀರ್ತನೆ

ಕೀರ್ತ 93:1–2, 5

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. 2ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ. 5ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಎರಡನೆಯ ವಾಚನ

ಪ್ರಕ 1:5–8

5ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, 6ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. 7ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್. 8“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ಸುವಾರ್ತೆ

ಯೋಹಾ 18:33–37

33ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. 34ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು. 35ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ, 36ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. 37ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು