Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 22 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ನವೆಂಬರ್ 2027

ಸೋಮವಾರ · ಸಾಮಾನ್ಯ ಕಾಲದ 34ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 34ನೇ ವಾರದ ಸೋಮವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಸಿಸಿಲಿಯಾ, ಕನ್ಯೆ ಮತ್ತು ಹುತಾತ್ಮ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ದಾನಿ 1:1–6, 8–20

1ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು. 2ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು. 3ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ 4ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು. 5ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು. 6ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು. 8ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು. 9ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು. 10ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು. 11ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು 12ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ. 13ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು. 14ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು. 15ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು. 16ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು. 17ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು. 18ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು. 19ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು. 20ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

ಪ್ರತಿವಚನ ಕೀರ್ತನೆ

ಈ ಅನುವಾದದಲ್ಲಿ ಇಲ್ಲ

ಸುವಾರ್ತೆ

ಲೂಕ 21:1–4

1ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು. 2ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ, 3“ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. 4ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು