Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 22 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 9 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ನವೆಂಬರ್ 2027

ಸೋಮವಾರ · ಪಂಚಾಶತ್ತಮದ ನಂತರದ 23ನೇ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Martyrs Onisiphorus and Porphyrius of Ephesus (3rd-4th C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಥೆಸ 1:1–5

1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. 2ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. 4ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು. 5ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.

ಸುವಾರ್ತೆ

ಲೂಕ 12:13–15, 22–31

13ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು, 14ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ, 15ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು. 22ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ. 23ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು. 24ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. 25ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ನಿಮ್ಮಲ್ಲಿ ಯಾರಿಂದಾದೀತು? 26ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ? 27ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. 28ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು. 29ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. 30ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ. 31ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 22 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು