ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 23 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ನವೆಂಬರ್ 2027
ಮಂಗಳವಾರ · ಸಾಮಾನ್ಯ ಕಾಲದ 34ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 34ನೇ ವಾರದ ಮಂಗಳವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಕ್ಲೆಮೆಂಟ್ I, ಪೋಪ್ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ಸಂತ ಕೊಲಂಬನ್, ಮಠಾಧಿಪತಿ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
31“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು. 32ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ, 33ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು. 34“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು. 35ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. 36“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. 37ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ. 38ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ. 39“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. 40“ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು. 41“ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು. 42ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು. 43ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ. 44“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು. 45ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
ಪ್ರತಿವಚನ ಕೀರ್ತನೆ
ಈ ಅನುವಾದದಲ್ಲಿ ಇಲ್ಲ
ಸುವಾರ್ತೆ
5ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ, 6ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು. 7ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು, 8ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ. 9ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. 10ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. 11ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
ಇಂದಿನ ಸಂತರು
- ಸಂತ ಕ್ಲೆಮೆಂಟ್ I, ಪೋಪ್ ಮತ್ತು ಹುತಾತ್ಮ
- ಸಂತ ಕೊಲಂಬನ್, ಮಠಾಧಿಪತಿ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು