Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 23 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 10 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ನವೆಂಬರ್ 2027

ಮಂಗಳವಾರ · ಪಂಚಾಶತ್ತಮದ ನಂತರದ 23ನೇ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Apostles of the 70: Herastos, Olympos, Rodion, Sosipater, Quartus and Tercias (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಥೆಸ 1:6–10

6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ. 7ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ. 8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ. 9ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ 10ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಸುವಾರ್ತೆ

ಲೂಕ 12:42–48

42ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು? 43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 45ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, 46ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. 47ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. 48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 23 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು