ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 24 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ನವೆಂಬರ್ 2027
ಬುಧವಾರ · ಸಾಮಾನ್ಯ ಕಾಲದ 34ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 34ನೇ ವಾರದ ಬುಧವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತ ಆಂಡ್ರ್ಯೂ ಡುಂಗ್-ಲಾಕ್, ಧರ್ಮಗುರು, ಮತ್ತು ಸಂಗಡಿಗರು, ಹುತಾತ್ಮರು · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ದಾನಿ 5:1–6, 13–14, 16–17, 23–28
1ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. 2ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. 3ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. 4ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು. 5ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು. 6ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. 13ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ? 14ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ. 16ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. 17ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. 23ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ. 24ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು. 25“ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’ 26ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. 27ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ. 28ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.
ಪ್ರತಿವಚನ ಕೀರ್ತನೆ
ಈ ಅನುವಾದದಲ್ಲಿ ಇಲ್ಲ
ಸುವಾರ್ತೆ
12ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. 14ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. 16ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
ಇಂದಿನ ಸಂತರು
- ಸಂತ ಆಂಡ್ರ್ಯೂ ಡುಂಗ್-ಲಾಕ್, ಧರ್ಮಗುರು, ಮತ್ತು ಸಂಗಡಿಗರು, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು