ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 24 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 11 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ನವೆಂಬರ್ 2027
ಬುಧವಾರ · ಪಂಚಾಶತ್ತಮದ ನಂತರದ 23ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Great Martyr Menas of Egypt († 304)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ, 2ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ. 3ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ. 4ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ. 5ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ. 6ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ. 7ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ. 8ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
ಸುವಾರ್ತೆ
48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು. 49“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ. 50ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ. 51ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. 52ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. 53ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು. 54ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ. 55ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. 56ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? 57“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? 58ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. 59ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 24 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು