ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 26 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ನವೆಂಬರ್ 2027
ಶುಕ್ರವಾರ · ಸಾಮಾನ್ಯ ಕಾಲದ 34ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 34ನೇ ವಾರದ ಶುಕ್ರವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
2ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು. 3ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು. 4ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು. 5ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು. 6ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು. 7ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು. 8ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು. 9“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. 10ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು. 11ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. 12ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು. 13ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. 14ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
ಪ್ರತಿವಚನ ಕೀರ್ತನೆ
ಈ ಅನುವಾದದಲ್ಲಿ ಇಲ್ಲ
ಸುವಾರ್ತೆ
29ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ. 30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. 31ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. 32“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು