Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 27 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ನವೆಂಬರ್ 2027

ಶನಿವಾರ · ಸಾಮಾನ್ಯ ಕಾಲದ 34ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 34ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ದಾನಿ 7:15–27

15“ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು. 16ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ, 17‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು. 18ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು. 19ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು. 20ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ 21ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, 22ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.” 23ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು. 24ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು. 25ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು. 26ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು. 27ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಪ್ರತಿವಚನ ಕೀರ್ತನೆ

ಈ ಅನುವಾದದಲ್ಲಿ ಇಲ್ಲ

ಸುವಾರ್ತೆ

ಲೂಕ 21:34–36

34“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. 35ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. 36ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು