Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 28 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ನವೆಂಬರ್ 2027

ಭಾನುವಾರ · ಆಗಮನ ಕಾಲದ ಮೊದಲನೆಯ ವಾರ

ಹಬ್ಬಗಳು ಮತ್ತು ಸಂತರು

ಆಗಮನ ಕಾಲದ ಮೊದಲನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಯೆರೆ 33:14–16

14ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು. 15ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು. 16ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”

ಪ್ರತಿವಚನ ಕೀರ್ತನೆ

ಕೀರ್ತ 25:4–5, 8–10, 14

4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. 10ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. 14ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಎರಡನೆಯ ವಾಚನ

1 ಥೆಸ 3:12–4:2

12ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ. 13ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ. 4:1ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ. 2ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.

ಸುವಾರ್ತೆ

ಲೂಕ 21:25–28, 34–36

25“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. 26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. 27ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. 28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. 34“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. 35ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. 36ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು