ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 29 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 29 ನವೆಂಬರ್ 2027
ಸೋಮವಾರ · ಆಗಮನ ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಮೊದಲನೆಯ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
1ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ. 2ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. 3ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು. 4ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ. 5ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. 4ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. 6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. 7ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” 8ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. 9ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
ಸುವಾರ್ತೆ
5ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು, 6“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು. 7ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು, 8ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 9ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು. 10ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. 11ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು