ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 30 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ನವೆಂಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Saint Gregory the Wonderworker, Bishop of Neo-Cæsarea († c. 266-270)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ? 10ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ. 11ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ. 12ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ. 13ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.
ಪತ್ರಿಕೆ (ಅದ್ಭುತಕಾರಿ ಸಂತ ಗ್ರೆಗೊರಿ)
7ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. 8ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು 9ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು, 10ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ. 11ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.
ಸುವಾರ್ತೆ
25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ, 26“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು. 28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? 29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು, 30‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು. 31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ? 32ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. 33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು. 34“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? 35ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 30 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು